ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ - Mahanayaka

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ

bjp mla
02/05/2022

ಅಂಬಾಲ: ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹರ್ಯಾಣದ ಅಂಬಾಲ ನಗರ ಕ್ಷೇತ್ರದ ಬಿಜೆಪಿ ಶಾಸಕ ಅಸೀಮ್ ಗೋಯೆಲ್ ಹಲವಾರು ಬಿಜೆಪಿ ಮುಖಂಡರ ಜೊತೆಗೆ ಪ್ರತಿಜ್ಞೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಈ ಪ್ರತಿಜ್ಞೆ ಮಾಡಲಾಗಿದ್ದು,  ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು  ನಾವು ಬದ್ಧರಾಗಿದ್ದೇವೆ. ಯಾವುದೇ ಬೆಲೆ ತೆತ್ತಾದರೂ ನಾವು ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎಂದು ವಿಡಿಯೋದಲ್ಲಿ ಪ್ರತಿಜ್ಞೆ ಮಾಡುತ್ತಿರುವುದು ಕಂಡು ಬಂದಿದೆ.

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ನಮ್ಮ ಪೂರ್ವಜರು ಮತ್ತು ದೇವತೆಗಳು ನಮಗೆ ಶಕ್ತಿ ನೀಡಲಿದ್ದಾರೆ ಎಂಬುದಾಗಿ ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅಸೀಮ್ ಗೋಯೆಲ್ ನಾನೊಬ್ಬ ಹಿಂದೂವಾಗಿ ಪ್ರತಿಜ್ಞೆ ಮಾಡಿದ್ದೇನೆಯೇ ಹೊರತು ಬಿಜೆಪಿ ಶಾಸಕನಾಗಿ ಅಲ್ಲ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾವರ್ಮಾದಲ್ಲಿ ಬಳಸುವ ಮಯೋನೆಸ್ ಎಷ್ಟು ಅಪಾಯಕಾರಿ?

ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಬಿ.ಎಲ್.ಸಂತೋಷ್ ಹೇಳಿಕೆ: ಹಾಲಿ ಶಾಸಕರಿಗೂ ಭೀತಿ!

ಬಸ್ಸಿನಿಂದ  ಕೆಸರು ಹಾರಿದ್ದಕ್ಕೆ ಚಾಲಕನಿಗೆ ವ್ಯಕ್ತಿಯಿಂದ ಚಪ್ಪಲಿಯೇಟು!

ಬೇಸಿಗೆ ಕಾಲದಲ್ಲಿ ಹೆಚ್ಚು ಬೆಳ್ಳುಳ್ಳಿ  ಸೇವಿಸಿದರೆ ಏನಾಗುತ್ತದೆ?

ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್!

ಇತ್ತೀಚಿನ ಸುದ್ದಿ