ಭಾರೀ ಮಳೆಗೆ ಕೊಚ್ಚಿ ಹೋದ ದೋಣಿಗಳು
02/08/2022
ಬೈಂದೂರು: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಯಿಂದಾಗಿ ಬೈಂದೂರು ತಾಲೂಕಿನ ವಿವಿಧೆಡೆ ನೆರೆ ಸೃಷ್ಠಿಯಾಗಿದ್ದು, ಇದರಿಂದ ಹಲವು ಮನೆಗಳು ಜಲಾವೃತಗೊಂಡಿವೆ.
ಹಲವು ದೋಣಿಗಳು ಕೊಚ್ಚಿ ಕೊಂಡು ಹೋಗಿ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಶಿರೂರು ಪೇಟೆ, ಅಡವಿನಕೋಣೆ, ಕಳಿಹಿತ್ಲು ಸೇರಿದಂತೆ ಹಲವು ಪ್ರದೇಶ ಗಳು ಜಲಾವೃತಗೊಂಡಿದ್ದು, ಮನೆ, ವಾಹನಗಳಿಗೆ ಹಾನಿಯಾಗಿವೆ. ನೆರೆ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ಉಪವಿಭಾಗದ ಆಯುಕ್ತ ರಾಜು, ಮಾಜಿ ಶಾಸಕ ಗೋಪಾಲ ಪೂಜಾರಿ ಭೇಟಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka