ಪ್ರಯಾಣಿಕರೇ ಎಚ್ಚರ! | ಭಾರೀ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭಾರೀ ಬಿರುಕು - Mahanayaka
3:23 AM Wednesday 11 - December 2024

ಪ್ರಯಾಣಿಕರೇ ಎಚ್ಚರ! | ಭಾರೀ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭಾರೀ ಬಿರುಕು

sakaleshpura
22/07/2021

ಮಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ಹಲವಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಪರಿಣಾಮ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಭೂ ಕುಸಿತ ಉಂಟಾಗಿದ್ದು, ರಸ್ತೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ.

ಸಕಲೇಶಪುರ ತಾಲೂಕಿನ ದೋಣಿಕಲ್  ನಲ್ಲಿ  ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು,  ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ.

ಪ್ರತಿ ಬಾರಿ ಮಳೆಗಾಲದಲ್ಲಿಯೂ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗುತ್ತಿದೆ. ಎಡೆ ಬಿಡದೇ ಮಳೆ ಸುರಿದ ಪರಿಣಾಮವಾಗಿ ಈ ರಸ್ತೆಯಲ್ಲಿ ಭೂ ಕುಸಿತ ಸಂಭವಿಸಿದ್ದು, ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕಿದೆ.

ಮಂಗಳೂರು-ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು,  ರಸ್ತೆಯ ಬದಿಯಲ್ಲಿ ಮಣ್ಣು ಕುಸಿದು ಬಿದ್ದಿದ್ದು, ಪರಿಣಾಮವಾಗಿ ರಸ್ತೆ  ಬಿರುಕು ಬಿಟ್ಟಿದೆ. ಆದರೂ ವಾಹನ ಚಾಲಕರು ರಸ್ತೆಯ ಒಂದು ಬದಿಯಿಂದ ವಾಹನವನ್ನು ನುಗ್ಗಿಸುತ್ತಿದ್ದಾರೆ. ಪ್ರಯಾಣಿಕರು ಬದಲಿ ಮಾರ್ಗವನ್ನು ಬಳಸುವುದು ಸೂಕ್ತ ಎನ್ನುವ ಮಾತುಗಳು ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳು…

ಬಿಗ್ ಬ್ರೇಕಿಂಗ್ ನ್ಯೂಸ್: ರಾಜೀನಾಮೆ ಬಗ್ಗೆ  ಸಿಎಂ ಯಡಿಯೂರಪ್ಪರಿಂದ ಮಹತ್ವದ ಹೇಳಿಕೆ

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿ ಅದೇ ಬಸ್ ನಡಿಗೆ ಸಿಲುಕಿ ಬಲಿಯಾದಳು | ಹೃದಯ ವಿದ್ರಾವಕ ಘಟನೆ

ಸಿದ್ದಲಿಂಗ ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು | ಹೆಚ್.ವಿಶ್ವನಾಥ್

ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ನೆನೆದು ಗಳಗಳನೇ ಅತ್ತ ಜನಾರ್ದನ ಪೂಜಾರಿ

charmadi

ಇತ್ತೀಚಿನ ಸುದ್ದಿ