ಭೀಕರ ರಸ್ತೆ ಅಪಘಾತ | ಸಂಕ್ರಾಂತಿ ಟೂರ್ ಗೆ ಹೋಗುತ್ತಿದ್ದ 11 ಮಂದಿ ಸಾವು
ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬಲ್ಲಿ ನಡೆದಿದೆ.
ಟೆಂಪೋಟ್ರಾವೆಲರ್ ನಲ್ಲಿ ಮಹಿಳೆಯರು ದಾವಣಗೆರೆಯಿಂದ ಗೋವಾ ಕಡೆಗೆ ತೆರಳುತ್ತಿದ್ದರು. ಇಟ್ಟಿಗಟ್ಟಿ ಎಂಬ ಪ್ರದೇಶಕ್ಕೆ ತಲುಪುತ್ತಿದ್ದಂತೆಯೇ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಇನ್ನೂ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಮಹಿಳೆಯರು ಟೂರ್ ಆಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಮಹಿಳೆಯರೇ ಪ್ರಯಾಣ ಆರಂಭಿಸಿದ್ದರು. ಮೃತರ ಪೈಕಿ ಬಸ್ ಚಾಲಕನನ್ನು ಹೊರತು ಪಡಿಸಿದರೆ ಉಳಿದವರೆಲ್ಲರೂ ಮಹಿಳೆಯರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11ಸಾವನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.