ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ | 6 ಜನರ ದಾರುಣ ಸಾವು - Mahanayaka
10:17 AM Thursday 12 - December 2024

ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ | 6 ಜನರ ದಾರುಣ ಸಾವು

09/02/2021

ಜಲಾಲ್ ಪುರ: ಉತ್ತರ ಪ್ರದೇಶದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಈ ಅಪಘಾತಕ್ಕೆ ಬಲಿಯಾಗಿದ್ದಾರೆ. ಟ್ರಕ್ ಹಾಗೂ ಪಿಕಪ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ.

 ಜೌನ್​ಪುರ ಜಿಲ್ಲೆಯ ಜಲಾಲ್​ಪುರ ​ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ತೀವ್ರತೆಗೆ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಜಲಾಲ್ ಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನಿಮ್ಮ ವಾಟ್ಸಾಪ್ ಗ್ರೂಪ್ ಗೆ ಈ ನಂಬರ್ ಸೇರಿಸಿ: 6363101317

ಇತ್ತೀಚಿನ ಸುದ್ದಿ