ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು
ಧಾರವಾಡ: ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಶನಿವಾರ ನಸುಕಿನ ವೇಳೆಯಲ್ಲಿ ನಡೆದಿದೆ.
ಅನನ್ಯ(14), ಹರೀಶ(13), ಶಿಲ್ಪಾ (34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ (11) ಹಾಗೂ ಶಂಭುಲಿಂಗಯ್ಯ (35) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ವಾಹನದಲ್ಲಿದ್ದ ಇತರ 6ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದವರು ಎಂದ ತಿಳಿದು ಬಂದಿದ್ದು, ಮದುವೆಗೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತೂಕ ಇಳಿಸಲು ಸಹಕಾರಿಯಾಗಿರುವ 3 ಬಗೆಯ ಚಹಾಗಳು!
ಪಠ್ಯ ಪುಸ್ತಕದಿಂದ ನಾರಾಯಣ ಗುರು ಹೊರಗೆ: “ಬಿಲ್ಲವ ಸಚಿವರು ರಾಜೀನಾಮೆ ನೀಡಲಿ”
ಹುಡುಗಿ ನೋಡಿ ಬರುತ್ತೇನೆ ಎಂದು ಹೊರಟಿದ್ದ ಯುವಕ ನೀರುಪಾಲು!
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ