ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವು | 36 ಗಂಟೆಗಳಲ್ಲಿ ಕರಾವಳಿಯಲ್ಲಿ 4 ಸಾವು - Mahanayaka
3:32 AM Wednesday 5 - February 2025

ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವು | 36 ಗಂಟೆಗಳಲ್ಲಿ ಕರಾವಳಿಯಲ್ಲಿ 4 ಸಾವು

08/02/2021

ಪುತ್ತೂರು:  ಭೀಕರ ಅಪಘಾತವೊಂದರಲ್ಲಿ  ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಎಂಬಲ್ಲಿ ಸೋಮವಾರ ನಡೆದಿದೆ.

ಮಹೀಂದ್ರಾ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಾಮೆತ್ತಡ್ಕ ನಿವಾಸಿ ಪ್ರಸಾದ್ ಎಂಬವರು ಅಪಘಾತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,  ಪಿಕಪ್ ವಾಹನ ಸಮೀಪದ ಚರಂಡಿಗೆ ವಾಲಿತ್ತು.  ಕರಾವಳಿಯಲ್ಲಿ  ಕಳೆದ 36 ಗಂಟೆಗಳ ಅವಧಿಯಲ್ಲಿ ವಿವಿಧೆಡೆಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ.

ಇತ್ತೀಚಿನ ಸುದ್ದಿ