ದ್ವಿಚಕ್ರ ವಾಹನ - ಲಾರಿ ಮುಖಾಮುಖಿ ಡಿಕ್ಕಿ; ಸವಾರ ಸಾವು - Mahanayaka

ದ್ವಿಚಕ್ರ ವಾಹನ – ಲಾರಿ ಮುಖಾಮುಖಿ ಡಿಕ್ಕಿ; ಸವಾರ ಸಾವು

road accident tumkur
21/01/2022

ಚಿಕ್ಕಮಗಳೂರು: ದ್ವಿಚಕ್ರವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಯಾ ಕ್ರಾಸ್‌ ಬಳಿ ಸಂಭವಿಸಿದೆ.

ಶಾಹಿದ್ ಬಾಷಾ (30) ಮೃತ ಸವಾರ. ಹಿಂಬದಿ ಸವಾರ ಕಲ್ದೊಡ್ಡಿಯ ಇರ್ಫಾನ್‌ ತೀವ್ರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಶಾಹಿದ್‌ ಅವರು ಸ್ನೇಹಿತನೊಂದಿಗೆ ಸ್ಕೂಟಿಯಲ್ಲಿ ಯಗಟಿಗೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಕ್ಯಾಂಟರ್‌ ಲಾರಿ ಲಕ್ಯಾ ಕ್ರಾಸ್‌ ಬಳಿಯ ದತ್ತಾತ್ರೇಯ ನರ್ಸರಿ ತಿರುವಿನಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಘಟನೆ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಖ್ಯಾತ ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು

ಹೆಸರಾಂತ ಮಕ್ಕಳ ತಜ್ಞ ಡಾ.ದಿನೇಶ್ ಅವರ ಸ್ಮರಣಾರ್ಥ ಚಾಲ್ಸ್ ಆಂಬುನೆಲ್ಸ್ ನಿಂದ ಉಚಿತ ಸೇವೆ

ಬಿಜೆಪಿ ಶಾಸಕ ಅನಿಲ್‌ ಬೆನಕೆಯಿಂದ ಕೋವಿಡ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು

ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ

ಇತ್ತೀಚಿನ ಸುದ್ದಿ