ಸ್ಕಾರ್ಫಿಯೋ – ಟ್ರಕ್ ಮುಖಾಮುಖಿ ಡಿಕ್ಕಿ | 8 ಜನರ ದಾರುಣ ಸಾವು

11/03/2021

ಲಕ್ನೋ:  ಸ್ಕಾರ್ಫಿಯೋ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ 8 ಜನರು ಸಾವಿಗೀಡಾದ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದ ಬಳಿ ನಡೆದಿದೆ.  ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಕಾರ್ಫಿಯೋದಲ್ಲಿ 12 ಜನರು ಪ್ರಯಾಣಿಸುತ್ತಿದ್ದು, ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಸ್ಕಾರ್ಫಿಯೋ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು,  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ  ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು,  ಸಾವು ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಹೇಳಲಾಗಿದೆ. ಘಟನೆ ಸಂಬಂಧ ಎಟ್ಮದ್ದಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version