ಐಟಿಐ ಪಾಸಾದವರಿಗೆ ಸಿಹಿ ಸುದ್ದಿ: ಭಾರತದ ಅತಿ ದೊಡ್ಡ ಇಂಜಿನಿಯರಿಂಗ್ ಕಂಪನಿಯಲ್ಲಿದೆ ಉದ್ಯೋಗಾವಕಾಶ

BHEL Welder Jobs 2024: ಭಾರತ ದೇಶದ ಇಂಜಿನಿಯರಿಂಗ್ ಮತ್ತು ಉತ್ಪನ್ನ ಸಂಸ್ಥೆಯಲ್ಲಿ ಅತಿ ದೊಡ್ಡ ಸಂಸ್ಥೆಯಾಗಿರುವ ” ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್” ನಲ್ಲಿ ಖಾಲಿ ಇರುವ 50 ವೆಲ್ಡರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳ ವಿವರ, ಅರ್ಜಿ ಸಲ್ಲಿಸುವ ಮಾಹಿತಿ, ಅರ್ಜಿ ಸಲ್ಲಿಸುವ ಲಿಂಕ್, ಸಂಬಳ ಹಾಗೂ ಆಯ್ಕೆ ಪ್ರಕ್ರಿಯೆಗಳ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?:
ಈ ಸಂಸ್ಥೆಯಲ್ಲಿ ವೆಲ್ದರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಿಭಾಗದಲ್ಲಿ ಐಟಿಐ ಪೂರ್ಣಗೊಳಿಸಬೇಕು ಹಾಗೂ ಇದರ ಜೊತೆಗೆ 2 ವರ್ಷದ ಕೆಲಸದ ಅನುಭವ ಹೊಂದಿರಬೇಕು. ಅದೇ ರೀತಿ ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವವರು ಗರಿಷ್ಠ 30 ವರ್ಷದ ಒಳಗೆ ಇರಬೇಕು.
ಸಂಬಳ ಎಷ್ಟು ಸಿಗುತ್ತದೆ?:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ ವೇತನವು 15,000ರೂ. ಇರಲಿದೆ. ತರಬೇತಿಯು ಮುಗಿದ ಬಳಿಕ ಅಭ್ಯರ್ಥಿಗಳಿಗೆ ಮಾಸಿಕ ವೇತನವು 42,500ರೂ. ಇರಲಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?:
ಅರ್ಜಿ ಸಲ್ಲಿಸಿದಂತಹ ಅರ್ಹ ಅಭ್ಯರ್ಥಿಗಳು ಐಟಿಐ ಕೋರ್ಸ್ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೇರಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇದರ ನಂತರ ಅಭ್ಯರ್ಥಿಗಳ ಕೌಶಲ ಪರೀಕ್ಷೆ ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ನಂತರ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2024
ಅರ್ಜಿ ಶುಲ್ಕ: – ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು 250ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಹೇಗೆ ಸಲ್ಲಿಸಬೇಕು?:
ಅರ್ಹರಿರುವ ಅಭ್ಯರ್ಥಿಗಳು ಮೊದಲು ಸಂಸ್ಥೆಯ ಅಧಿಕೃತ ಜಾಲತಾಣ https://bhel.com/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು ನಂತರ ಈ ಅರ್ಜಿ ನಮೂನೆಯನ್ನು ಕೆಳಗಿನ ವಿಳಾಸಕ್ಕೆ ಸ್ವಯಂ ದೃಢೀಕರಿಸಿದ ದಾಖಲಾತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ನವೆಂಬರ್ 8ರ ಒಳಗಾಗಿ ಕಳುಹಿಸಬೇಕು.
ವಿಳಾಸ :
BHEL PSSR, BHEL
Integrated Office Complex, TNEB Road,
Pallikaranai, Chennai–600100
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: