ಭಿಕ್ಷುಕರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ | ಲಾ ಅಂಡ್ ಆರ್ಡರ್, ಟ್ರಾಫಿಕ್ ಪೊಲೀಸರಿಂದ ಜಂಟಿ ಕಾರ್ಯಾಚರಣೆ?

16/02/2021

ಬೆಂಗಳೂರು: ಬೆಂಗಳೂರಿನ ಸಿಗ್ನಲ್ ಗಳಲ್ಲಿ ಭಿಕ್ಷೆ ಬೇಡುವ ಭಿಕ್ಷುಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.

ಸಿಗ್ನಲ್ ಗಳಲ್ಲಿ ಭಿಕ್ಷೆ ಬೇಡುವ ಭಿಕ್ಷುಕರಿಂದ ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ. ಹೀಗಾಗಿ ಭಿಕ್ಷೆ ಬೇಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಅನೇಕ ಮಂದಿ ಪೊಲೀಸರಿಗೆ ಮನವಿ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ.

ಟ್ರಾಫಿಕ್ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಅಯಾ ವ್ಯಾಪ್ತಿಯ ಟ್ರಾಫಿಕ್‌ ಪೋಲಿಸ್‌ ಠಾಣೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಲಾ ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version