ಭೀಮನ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ: ದೇಗುಲ ಪ್ರಾಂಗಣ ಹಣ್ಣು-ತರಕಾರಿ ಅಲಂಕಾರ

ಚಾಮರಾಜನಗರ: ಭೀಮನ ಅಮಾವಾಸ್ಯೆ ಪ್ರಯುಕ್ತ ಕರ್ನಾಟಕದ ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗಾರವೇ ಏರ್ಪಟ್ಟಿದ್ದು ಅಮಾವಾಸ್ಯೆ ಹಿಂದಿನ ದಿನವೇ 80 ಸಾವಿರದಷ್ಟು ಮಂದಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ.
ಮಾದಪ್ಪನ ಬೆಟ್ಟದಲ್ಲಿ ಎತ್ತ ನೋಡಿದರತ್ತ ಭಕ್ತ ಸಮೂಹವೇ ಕಾಣುತ್ತಿದ್ದು ಸಾರಿಗೆ ಸಂಸ್ಥೆಯು ಹೆಚ್ಚುವರಿಯಾಗಿ 300 ಬಸ್ ಗಳನ್ನು ನಿಯೋಜನೆ ಮಾಡಿದೆ. ದೇಗುಲ ಪ್ರಾಂಗಣಕ್ಕೆ ಹಣ್ಣು- ತರಕಾರಿಗಳಿಂದ ಅಲಂಕಾರ ಮಾಡಿದ್ದು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ. ಇನ್ನು, ಶ್ರೀಕ್ಷೇತ್ರವು ಭಕ್ತರ ಜೈಕಾರಗಳಿಂದ ಮಿಂದೇಳುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw