ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ

ಬೆಳಗಾವಿ: ತುಮಕೂರು ಮತ್ತು ಬೆಂಗಳೂರಿನಲ್ಲಿ ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳನ್ನು ಈ ವರ್ಷ ರಕ್ಷಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವರು ತಮ್ಮ ಸ್ವಂತ ಮಕ್ಕಳನ್ನು ಭಿಕ್ಷಾಟನೆಗೆ ಬಳಕೆ ಮಾಡುತ್ತಿದ್ದರೆ, ಇನ್ನು ಕೆಲವರು ಬೇರೆಯವರ ಮಕ್ಕಳನ್ನು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ ಎಂದರು.
ತುಮಕೂರಿನಲ್ಲಿ 6 ಮಕ್ಕಳನ್ನು ರಕ್ಷಿಸಲಾಗಿದೆ. ಬೆಂಗಳೂರಿನ ವಿವಿಧೆಡೆಗಳಲ್ಲಿ ಆಗಸ್ಟ್ ತಿಂಗಳಿನಲ್ಲಿ 22 ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಲಾಗಿದೆ. 14 ಜಿಲ್ಲೆಗಳಲ್ಲಿ ಈಗಾಗಲೇ ಪುನರ್ವಸತಿ ಕೇಂದ್ರಗಳಿವೆ. ನಾಲ್ಕು ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಪ್ರಗತಿಯಲ್ಲಿದೆ. ಉಳಿದ ಜಿಲ್ಲೆಗಳಲ್ಇಯೂ ಪುನರ್ವಸತಿ ಕೇಂದ್ರ ಆರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರಿಯಕರನ ಸಾವಿನಿಂದ ನೊಂದು ನೇಣಿಗೆ ಶರಣಾದ ಯುವತಿ!
ಉಪ್ಪಿನಂಗಡಿ ಘಟನೆ ಖಂಡಿಸಿ ಮಂಗಳೂರಿನಲ್ಲಿ ಪಿಎಫ್ ಐ ಬೃಹತ್ ಪ್ರತಿಭಟನೆ
ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಬೈದಾಡಿಕೊಳ್ಳುತ್ತಿರುವ ವಿಡಿಯೋ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು ಗೊತ್ತಾ?
“ರೇಪ್ ತಡೆಯಲು ಆಗದಿದ್ದರೆ, ಮಲಗಿ ಎಂಜಾಯ್ ಮಾಡಬೇಕು” | ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ರಮೇಶ್ ಕುಮಾರ್