ಬೀದರ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸುವುದು ಹೇಗೆ? - Mahanayaka

ಬೀದರ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸುವುದು ಹೇಗೆ?

bidar
24/02/2025

Bidar District Bank Recruitment 2025 — ಬೀದರ್ ಜಿಲ್ಲೆಯಲ್ಲಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತಹ ಮುಖ್ಯ ಪ್ರಧಾನ ವ್ಯವಸ್ಥಾಪಕರ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳಿಗೆ ಈ ಅವಕಾಶವನ್ನು ಉಪಯೋಗಿಸಿಕೊಳ್ಳಲು, ಬೇಕಾಗಿರುವಂತಹ ಅರ್ಜಿ ಸಲ್ಲಿಸುವ ಮಾಹಿತಿ, ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳೇನು? ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ವಿವಿಧ ಉಪಯುಕ್ತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಯ ವಿವರ :

ಬೀದರ್ ಜಿಲ್ಲೆಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಒಟ್ಟು ಒಂದು ಮುಖ್ಯ ಪ್ರಧಾನ ವ್ಯವಸ್ಥಾಪಕರ (Chief General Manager) ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ :

ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ,ಹಣಕಾಸು ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾನಕೋತ್ತರ ಪದವಿ ಮುಗಿಸಿರಬೇಕು. ಇದೆ ಕ್ಷೇತ್ರದಲ್ಲಿ 10 ರಿಂದ 15 ವರ್ಷಗಳ ಕನಿಷ್ಠ ಅನುಭವ ಹೊಂದಿರಬೇಕು. ಗರಿಷ್ಠ ವಯೋಮಿತಿಯ 65 ವರ್ಷಕ್ಕೆ ನಿಗದಿಪಡಿಸಲಾಗಿದೆ.

ಹುದ್ದೆಗೆ ಆಯ್ಕೆಯಾದವರಿಗೆ ಅಕರ್ಷಿಕ ಸಂಬಳದ ಜೊತೆಗೆ ಕೇಂದ್ರ ಕಚೇರಿಯಲ್ಲಿ ವಸತಿ ವ್ಯವಸ್ಥೆಯನ್ನು ನೀಡಲಾತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆಗೆ ಅರ್ಜಿ ಶುಲ್ಕ :

* ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಮಾನ್ಯ, ಪ್ರವರ್ಗ2 (ಎ), 2(ಬಿ), 3(ಎ), 3(ಬಿ) ವರ್ಗಗಳಿಗೆ ಸೇರಿದಂತಹ ಅಭ್ಯರ್ಥಿಗಳಿಗೆ 2000ರೂ. ನಿಗದಿಪಡಿಸಲಾಗಿದೆ.

* SC, ST, ಪ್ರವರ್ಗ-1,ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 1000ರೂ. ನಿಗದಿಪಡಿಸಲಾಗಿದೆ

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿ ಮಾಡಿ, ಈ ಅರ್ಜಿಯನ್ನು ಪಿಡಿಎಫ್ ಸ್ವರೂಪದಲ್ಲಿ ಬ್ಯಾಂಕಿನ ಇಮೇಲ್ ಗೆ ಕಳುಹಿಸಬೇಕು ಅಥವಾ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಬಹುದು.

ಬ್ಯಾಂಕಿನ ಇಮೇಲ್ :   dccbank bdr@yahoo.co.in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  03 ಮಾರ್ಚ್ 2025

 ಬ್ಯಾಂಕಿನ ಅಧಿಕೃತ ಜಾಲತಾಣ : https://bidardccbank.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ