ಸಿ.ಟಿ.ರವಿಗೆ ಬಿಗ್ ರಿಲೀಫ್: ತಕ್ಷಣ ಬಿಡುಗಡೆ ಮಾಡಲು ಹೈಕೋರ್ಟ್ ಆದೇಶ - Mahanayaka

ಸಿ.ಟಿ.ರವಿಗೆ ಬಿಗ್ ರಿಲೀಫ್: ತಕ್ಷಣ ಬಿಡುಗಡೆ ಮಾಡಲು ಹೈಕೋರ್ಟ್ ಆದೇಶ

lakshmi hebbalkar c t ravi
20/12/2024

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.

ಸಿ.ಟಿ.ರವಿ ವಿರುದ್ಧ ಎಫ್ ಐಆರ್ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದ್ದು, ತನಿಖೆಗೆ ಸಹಕರಿಸಬೇಕು ಎನ್ನುವ ಷರತ್ತು ವಿಧಿಸಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಪೊಲೀಸರು ಸಿ.ಟಿ.ರವಿಯನ್ನು ಬಂಧಿಸಿದ್ದರು. ಬಳಿಕ ನಿನ್ನೆ ಇಡೀ ರಾತ್ರಿ ಹೈಡ್ರಾಮಾವೇ ನಡೆದು ಹೋಗಿತ್ತು. ಇಂದು ಬೆಳಗಾವಿ ಕೋರ್ಟ್ ನಿಂದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ನಡುವೆ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಕ್ಷಣವೇ ಬಿಡುಗಡೆಗೆ ಸೂಚನೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ