ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

18/09/2023
ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಎ.ಮಂಜು, ದೇವರಾಜೇಗೌಡ ಅವರು ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.
ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಮೇಲ್ವನವಿ ಅರ್ಜಿಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಪೀಠ, ಕರ್ನಾಟಕ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.