ರಿಲೀಫ್: ಲಕ್ಷದ್ವೀಪದ ಸಂಸದನಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್ - Mahanayaka
8:45 AM Saturday 21 - September 2024

ರಿಲೀಫ್: ಲಕ್ಷದ್ವೀಪದ ಸಂಸದನಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

23/08/2023

ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮುಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ ಸಂಸದ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ.

ಮತ್ತೆ ಈ ಬಗ್ಗೆ ವಿಚಾರಣೆ ನಡೆಸುವಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆ ನಡೆಸುವಂತೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ಕೇರಳ ಹೈಕೋರ್ಟ್​ಗೆ ಹಿಂತಿರುಗಿಸಿದೆ. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಲೋಕಸಭೆಯ ಸಂಸದರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸುವಲ್ಲಿ ಹೈಕೋರ್ಟ್‌ನ ವಿಧಾನವು ತಪ್ಪು ಎಂದು ಹೇಳಿದೆ.

2023ರ ಜನವರಿಯಲ್ಲಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಮುಹಮ್ಮದ್ ಫೈಜಲ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಯಿತು. ಬಳಿಕ ಅವರು ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.


Provided by

ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಿಚಾರಣೆ ಮಾಡುವವರೆಗೆ ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸುವುದಾಗಿ ಹೈಕೋರ್ಟ್ ಹೇಳಿತ್ತು. ಹೈಕೋರ್ಟ್​ನ ಈ ಆದೇಶವನ್ನು ಲಕ್ಷದ್ವೀಪ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಮೊಹಮ್ಮದ್ ಫೈಜಲ್ ಅವರ ಪರವಾಗಿ ನೀಡಿರುವ ಈ ಆದೇಶವು, ನ್ಯಾಯಾಂಗದ ಮೇಲಿನ ನಂಬಿಕೆ ಜನರಲ್ಲಿ ಹೋಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇತ್ತೀಚಿನ ಸುದ್ದಿ