ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ - Mahanayaka

ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

sidharth shukla
02/09/2021

ಮುಂಬೈ: ಬಾಲಿವುಡ್ ನಟ, ಬಿಗ್ ಬಾಸ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದು, 40 ವರ್ಷ ವಯಸ್ಸಿನ ಸಿದ್ಧಾರ್ಥ್ ಶುಕ್ಲಾ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

ಅನಾರೋಗ್ಯಕ್ಕೀಡಾದ ತಕ್ಷಣವೇ ಮುಂಬೈನ ಕೂಪರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.  ದೂರದರ್ಶನ ಕಾರ್ಯಕ್ರಮ ಬಾಬುಲ್ ಕಾ ಅಂಗನ್ ಚೂಟೆ ನಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಅವರು, ನಟನಾರಂಗಕ್ಕೆ ಈ ಮೂಲಕ ಪ್ರವೇಶಿಸಿದ್ದರು.

ಇದಲ್ಲದೇ ಜಾನೆ ಪೆಹ್ಚಾನೆ ಸೇ, ಯೇ ಅಜ್ನಬಿ, ಲವ್ ಯು ಜಿಂದಗಿ, ಬಾಲಿಕಾ ವಧು ಮೊದಲಾದ ಧಾರವಾಹಿಗಳಲ್ಲಿಯೂ ನಟಿಸಿದ್ದರು. ಮುಂದಿನ ಭರವಸೆಯ ನಟರಾಗಿದ್ದ ಸಿದ್ಧಾರ್ಥ್ ಇದೀಗ ತಮ್ಮ 40 ವರ್ಷ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್:  ಗ್ಯಾಸ್ ಬೆಲೆ 1 ಸಾವಿರದ ಗಡಿದಾಡುವ ಸಾಧ್ಯತೆ ಇದೆ!

ಮಹಿಳೆ ಜೊತೆಗೆ ಅಕ್ರಮ ಸಂಬಂಧ: ಕಾನ್‌ ಸ್ಟೇಬಲ್‌ ನ  ಕೈ ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿತ

ಕೈಕೊಟ್ಟ ಕೇಂದ್ರ ಸರ್ಕಾರ: ಈ ಪ್ರಮುಖ 10 ಯೋಜನೆಗಳಿಗೆ ಬಿಡಿಗಾಸೂ ಬಿಡುಗಡೆಯಾಗಿಲ್ಲ!

ಶಾಶ್ವತ ಸೂರಿಗಾಗಿ ರಸ್ತೆಯಲ್ಲಿ 6 ಕಿ.ಮೀ. ಉದ್ದಂಡ ನಮಸ್ಕಾರ ಹಾಕಿ ದಲಿತ ಮಹಿಳೆಯರು!

ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?

ಶಾಶ್ವತ ಸೂರಿಗಾಗಿ ರಸ್ತೆಯಲ್ಲಿ 6 ಕಿ.ಮೀ. ಉದ್ದಂಡ ನಮಸ್ಕಾರ ಹಾಕಿ ದಲಿತ ಮಹಿಳೆಯರು!

ಇತ್ತೀಚಿನ ಸುದ್ದಿ