ಜಲಾಭಿಷೇಕ ಮಾಡೋ ವೇಳೆ ನಡೀತು ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕನ್ವಾರಿಯಾಗಳ ಸಾವು
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಹೈಟೆನ್ಷನ್ ಓವರ್ ಹೆಡ್ ತಂತಿ ಸ್ಪರ್ಶಿಸಿ ಒಂಬತ್ತು ಕನ್ವರ್ ಯಾತ್ರಾ ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಇತರ ಮೂವರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಕೈಗಾರಿಕಾ ಪೊಲೀಸ್ ಠಾಣೆ ಪ್ರದೇಶದ ಸುಲ್ತಾನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ವೈಶಾಲಿ ಜಿಲ್ಲೆಯ ಕೈಗಾರಿಕಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಸುಲ್ತಾನ್‌ಪುರ ಗ್ರಾಮದಲ್ಲಿ ಹೈಟೆನ್ಷನ್ ಓವರ್ ಹೆಡ್ ತಂತಿ ಅವರ ವಾಹನದ ಮೇಲೆ ಬಿದ್ದ ಪರಿಣಾಮ ಒಂಬತ್ತು ಯಾತ್ರಾರ್ಥಿಗಳು (ಕನ್ವಾರಿಯಾಗಳು) ಸಾವನ್ನಪ್ಪಿದ್ದಾರೆ ಮತ್ತು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಕನ್ವಾರಿಯಾಗಳು ಜಲಾಭಿಷೇಕ ಮಾಡಲು ಸೋನೆಪುರದ ಬಾಬಾ ಹರಿಹರನಾಥ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಾಜಿಪುರ-ಸದರ್ ಉಪ ವಿಭಾಗೀಯ ಅಧಿಕಾರಿ ರಾಮ್ಬಾಬು ಬೈತಾ ಸುದ್ದಿಗಾರರಿಗೆ ತಿಳಿಸಿದರು.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth