ಬಿಹಾರ ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ!
ಬಿಹಾರ: ಸಿಎಂ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಕಾರಿನ ಗಾಜುಗಳು ಒಡೆದು ಹೋಗಿದ್ದು, ಕಾರು ಜಖಂಗೊಂಡಿದೆ.
ಇತ್ತೀಚೆಗಷ್ಟೇ ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡಿದ್ದ ನಿತೀಶ್ ಕುಮಾರ್, ಎನ್ ಡಿಎ ಮಿತ್ರಪಕ್ಷದಿಂದ ಹೊರ ಬಂದಿತ್ತು. ಆಗಸ್ಟ್ 10ರಂದು ಹೊಸ ಮೈತ್ರಿ ಪಕ್ಷವನ್ನು ರಚಿಸುವ ಮೂಲಕ ಹೊಸ ರಾಜಕೀಯದ ಆಟಕ್ಕೆ ಸಾಕ್ಷಿಯಾಗಿದ್ದರು.
ಈ ನಡುವೆ ಅವರ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ ನಡೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಜೊತೆಗೆ ಬಿಹಾರದ ಸೊಹ್ಗಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯಿಂದ ರೊಚ್ಚಿಗೆದ್ದು ಜನರು ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗುತ್ತಿದೆ.
ಘಟನೆ ನಡೆದ ವೇಳೆ ನಿತೀಶ್ ಕುಮಾರ್ ಅವರು ಕಾರಿನಲ್ಲಿರಲಿಲ್ಲ ಎನ್ನಲಾಗಿದೆ. ಕೃತ್ಯದ ಬಳಿಕ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕಲ್ಲು ತೂರಾಟಕ್ಕೆ ಅಸಲಿ ಕಾರಣ ಏನು ಅನ್ನೋದು ತನಿಖೆಯಿಂದ ತಿಳಿದು ಬರಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka