ಬಿಹಾರ ಚುನಾವಣಾ ಫಲಿತಾಂಶದಲ್ಲಿ ಭಾರೀ ತಿರುವು - Mahanayaka

ಬಿಹಾರ ಚುನಾವಣಾ ಫಲಿತಾಂಶದಲ್ಲಿ ಭಾರೀ ತಿರುವು

10/11/2020

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸುಗೊಂಡಿದ್ದು, ಇದೇ ಸಂದರ್ಭದಲ್ಲಿ ಫಲಿತಾಂಶ ಭಾರೀ ತಿರುವು ಪಡೆದುಕೊಂಡಿದೆ.ಆರಂಭದಲ್ಲಿ ಆರ್ ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದರೆ, ಇದೀಗ ಹೊಸ ಫಲಿತಾಂಶ ಬಂಧಿದ್ದು, ಬಿಜೆಪಿ ಮೈತ್ರಿ ಕೂಟವು, ಆರ್ ಜೆಡಿ ಮೈತ್ರಿಕೂಟವನ್ನು ಹಿಂದಿಕ್ಕಿದೆ.

ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗಿದೆ.  ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿತ್ತು. ಆರಂಭದಲ್ಲಿ ಆರ್ ಜೆಡಿ ಮೈತ್ರಿಕೂಟ ಮುನ್ನಡೆ ಸಾಧಿಸಿತ್ತು. ಆದರೆ ಬದಲಾದ ಫಲಿತಾಂಶದಲ್ಲಿ ಬಿಜೆಪಿ ಮೈತ್ರಿಕೂಟವು 105ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಹಾರ ಚುನಾವಣೆಯು ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸಿದೆ. ಅಂತಿಮ ಹಂತದ ಮತ ಎಣಿಕೆಯವರೆಗೂ ಫಲಿತಾಂಶ ಹೀಗೇ ಬರಬಹುದು ಎಂದು ಹೇಳಲು ಸಾಧ್ಯವಿಲ್ಲ.

ಇತ್ತೀಚಿನ ಸುದ್ದಿ