ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ: 7 ಸಾವು, 35 ಮಂದಿಗೆ ಗಾಯ
12/08/2024
ಬಿಹಾರದ ಜೆಹಾನಾಬಾದ್ ನ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಕಾಲ್ತುಳಿತ ಉಂಟಾಗಿದ್ದು ಮೂವರು ಮಹಿಳೆಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಮಖ್ದುಮ್ಪುರ್ ಬ್ಲಾಕ್‌ನ ವನವರ್ ಬೆಟ್ಟದಲ್ಲಿ ಈ ಘಟನೆ ನಡೆದಿದೆ.
ಗಾಯಾಳುಗಳನ್ನು ತಕ್ಷಣ ಮಖ್ದುಮ್ಪುರ್ ಮತ್ತು ಜೆಹಾನಾಬಾದ್ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಪವಿತ್ರ ಸಾವನ್ ತಿಂಗಳ ನಾಲ್ಕನೇ ಸೋಮವಾರದಂದು ಕಾಲ್ತುಳಿತ ಸಂಭವಿಸಿದೆ. ಈ ಸಮಯದಲ್ಲಿ ದೇವಾಲಯದಲ್ಲಿ ಸಾಮಾನ್ಯವಾಗಿ ಭಕ್ತರ ದಟ್ಟಣೆ ಹೆಚ್ಚಾಗಿರುತ್ತದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth