ದೂರು ನೀಡಲು ಬಂದಿದ್ದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್  ಅಧಿಕಾರಿ!

massage cop
29/04/2022

ಪಾಟ್ನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬ ಠಾಣೆಯಲ್ಲೇ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಹೊರಠಾಣೆಯ ಹಿರಿಯ ಅಧಿಕಾರಿ ಶಶಿ ಭೂಷಣ್ ಸಿನ್ಹಾ, ದೂರು ನೀಡಲು ಬಂದಿದ್ದ ಮಹಿಳೆಯನ್ನು ದುರ್ಬಳಕೆ ಮಾಡಿಕೊಂಡಿದ್ದು, ತನ್ನ ಶರ್ಟ್ ಬಿಚ್ಚಿ, ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಾ, ಫೋನ್ ನಲ್ಲಿ ಮಾತನಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಠಾಣೆಯ ಒಳಭಾಗದಲ್ಲಿಯೇ ಅಧಿಕಾರಿ ಮಹಿಳೆಯ ಜೊತೆಗೆ ಈ ರೀತಿಯ ವರ್ತನೆ ತೋರಿದ್ದಾನೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಘಟನೆಯ ಮಾಹಿತಿ ಪಡೆದ ಸಹರ್ಸಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಅವರು ಅಧಿಕಾರಿ ಶಶಿಭೂಷಣ ಸಿನ್ಹಾನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

160 ಭಾಷೆಗಳಲ್ಲಿ ತೆರೆಕಾಣಲಿದೆ ಅವತಾರ್‌ 2: ಚಿತ್ರ ಬಿಡುಗಡೆಯ ದಿನಾಂಕ ಫಿಕ್ಸ್

ಲಾರಿಗಳ ಮುಖಾಮುಖಿ ಡಿಕ್ಕಿ: ಇಬ್ಬರು ಲಾರಿ ಚಾಲಕರ ದಾರುಣ ಸಾವು

ಕುಡಿದು ಪ್ರಜ್ಞೆ ಇಲ್ಲದೇ ಬಿದ್ದ ವರ: ತನ್ನ ಸಂಬಂಧಿಯನ್ನೇ ಮದುವೆಯಾದ ವಧು!

18 ದಿನಗಳ ಕಣ್ಣಾಮುಚ್ಚಾಲೆ ಬಳಿಕ ಸಿಐಡಿಗೆ ಸಿಕ್ಕಿ ಬಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ

ಇತ್ತೀಚಿನ ಸುದ್ದಿ

Exit mobile version