ಬೈಕ್—ಕಾರು ಮುಖಾಮುಖಿ ಡಿಕ್ಕಿ: ದಂಪತಿ ದಾರುಣ ಸಾವು, ಇಬ್ಬರು ಮಕ್ಕಳಿಗೆ ಗಾಯ
ಹಾಸನ: ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಣಪಟ್ಟಣ ತಾಲೂಕಿನ ಬೆಳಗೀಹಳ್ಳಿ ಗೇಟ್ ಬಳಿ ನಡೆದಿದೆ.
ಚನ್ನರಾಯಣಪಟ್ಟಣ ತಾಲೂಕಿನ ತೋಟಿ ಗ್ರಾಮದ ಸುನೀಲ್ ಹಾಗೂ ಅವರ ಪತ್ನಿ ದಿವ್ಯಾ ಸಾವನ್ನಪ್ಪಿದವರಾಗಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದ ವೇಳೆ ಸುನೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ದಿವ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರ ಇಬ್ಬರು ಮಕ್ಕಳು ಅಪಘಾತದಲ್ಲಿ ಗಾಯಗೊಂಡಿದ್ದು, ಒಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ನಂತರ ಕಾರು ಚಾಲಕನೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು ಎನ್ನಲಾಗಿದೆ. ಯಾವುದೋ ವಾಹನ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದರು ಎಂದು ಹೇಳಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw