ಕಾರಿಗೆ ಬೈಕ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಕೋಲಾರ: ಕಾರು ಹಾಗೂ ಬೈಕ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯಲ್ಲಿ ನಡೆದಿದೆ.
ಇನ್ನೋವಾ ಕಾರಿನಲ್ಲಿದ್ದ ಮಹೇಶ(45) ಉದ್ವಿತ(2), ರತ್ನಮ್ಮ(60) ಹಾಗೂ ಬೈಕ್ ಸವಾರ ಮೃತಪಟ್ಟವರು ಎಂದು ತಿಳಿದು ಬಂದಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಸುಶ್ಮಿತಾ, ವಿರುತ, ಸುಜಾತ ಹಾಗೂ ಸುನೀಲ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಿಂದ ತಮ್ಮ ಗ್ರಾಮ ಕೆಜಿಎಫ್ ತಾಲೂಕಿನ ಕಮ್ಮಸಂದ್ರಕ್ಕೆ ವಾಪಸ್ ಬರುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಬಂಗಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: