ಬೈಕ್ ಗೆ ಡಿಕ್ಕಿ ಹೊಡೆದ ಕಾಲೇಜು ಬಸ್: ಬೈಕ್ ಸವಾರ ಸ್ಥಳದಲ್ಲೇ ಸಾವು

18/08/2022
ಬಳ್ಳಾರಿ: ಅತೀ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ನಗರದ ಹೊರ ವಲಯದ ಅಲ್ಲಿಪುರ ಮಹಾದೇವ ತಾತನ ಮಠದ ಬಳಿ ನಡೆದಿದೆ.
ಬಿಐಟಿಎಂ ಕಾಲೇಜು ಬಸ್ ಬೈಕ್ ಗೆ ಡಿಕ್ಕಿಯಾದ ಬಸ್ಸಾಗಿದ್ದು, ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದ ಪರಿಣಾಮ ಸುಮಾರು 3 ಗಂಟೆಗಳಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸ ಪಟ್ಟರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka