10:38 PM Wednesday 12 - March 2025

ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಲಾರಿ: ಮಗು ಸಹಿತ ಒಂದೇ ಕುಟುಂಬದ ಮೂವರು ಸಾವು

ballary
24/08/2022

ಬಳ್ಳಾರಿ: ಚಲಿಸುತ್ತಿದ್ದ ಬೈಕ್ ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಕೌಲ್ ಬಜಾರ್ ಪ್ಲೈ ಓವರ್ ಬಳಿ ನಡೆದಿದೆ.

ವೀರೇಶ್ (38), ಅಂಜಲಿ(29) ಮತ್ತು ಇವರ 5 ವರ್ಷದ ಮಗು ದಿನೇಶ್ ಮೃತಪಟ್ಟವರಾಗಿದ್ದಾರೆ. ಮೃತಪಟ್ಟವರು ಬಳ್ಳಾರಿಯ ಹೊಸ ಯರ್ರಗುಡಿ ನಿವಾಸಿಗಳು ಎಂದು ತಿಳಿದು ಬಂದಿದ್ದು, ಮೃತ ವೀರೇಶ್ ಪತ್ನಿ ಮೊರರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಲರ್ಕ್ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ದಂಪತಿಯು ತಮ್ಮ ಇಬ್ಬರು ಮಕ್ಕಳ ಜೊತೆಗೆ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರು ಮೃತಪಟ್ಟರೆ, 3 ವರ್ಷ ವಯಸ್ಸಿನ ಹನಿ ಎಂಬ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version