ಬೈಕ್ ಗೆ ಲಾರಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ತಾಯಿ ದಾರುಣ ಸಾವು
ಹಾಸನ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಹಿತ ತಾಯಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಪ್ರಣತಿ (3), ಪ್ರಣವ್(3) ಮತ್ತು ತಾಯಿ ಜ್ಯೋತಿ ಮೃತಪಟ್ಟವರಾಗಿದ್ದಾರೆ. ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ್ದು, ಡಿಕ್ಕಿಯ ರಭಸಕ್ಕೆ ಮಕ್ಕಳ ದೇಹ ಸಂಪೂರ್ಣ ಛಿದ್ರವಾಗಿದ್ದು, ಲಾರಿ ಸುಮಾರು 2 ಕಿ.ಮೀ. ವರೆಗೆ ಬೈಕನ್ನು ಎಳೆದುಕೊಂಡು ಹೋಗಿದ್ದು, ಒಂದು ಮಗುವಿನ ದೇಹ ಲಾರಿಯ ಟಯರ್ ಅಡಿ ಸಿಲುಕಿ ಮೂರು ಕಿ.ಮೀ. ದೂರ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.
ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನದ ಗವೇನಹಳ್ಳಿಯ ಶಿವಾನಂದ್ ಹಾಗೂ ಪತ್ನಿ ಜ್ಯೋತಿ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜ್ಯೋತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಾನಂದ್ಗೆ ಚಿಕಿತ್ಸೆ ಮುಂದುವರೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವು
ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಶೌಚಾಲಯದ ಗೋಡೆ ತೆರವುಗೊಳಿಸುತ್ತಿದ್ದ ವೇಳೆ ಮೈಮೇಲೆ ಬಿದ್ದ ಗೋಡೆ: ಇಬ್ಬರು ಮಹಿಳೆಯರ ದಾರುಣ ಸಾವು
ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?
ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ: ಅಚ್ಚರಿಗೆ ಕಾರಣವಾದ ಮುರುಗೇಶ್ ನಿರಾಣಿ ಹೇಳಿಕೆ
ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್