ಬೈಕ್–ಈಚರ್ ಲಾರಿ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
15/09/2022
ಬೆಳ್ತಂಗಡಿ: ಅಳದಂಗಡಿ ಪಿಲ್ಯ ಮಸೀದಿ ಎದುರು ಬೈಕ್ ಮತ್ತು ಈಚರ್ ಲಾರಿ ಡಿಕ್ಕಿಯಾದ ಘಟನೆ ಸೆ.15ರಂದು ರಾತ್ರಿ ನಡೆದಿದೆ.
ಅಪಘಾತದ ಪರಿಣಾಮ ಬೈಕ್ ಸವಾರ ಕುದ್ಯಾಡಿಯ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈಚರ್ ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka