ಅಪಘಾತಕ್ಕೀಡಾದ ಬೈಕ್: ರಸ್ತೆ ಬದಿಯ ಡ್ರೈನೇಜ್ ಗೆ ಬಿದ್ದು ಯುವತಿ ಸಾವು
ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಯುವತಿ ಡ್ರೈನೇಜ್ ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಹೆಚ್.ಬಿ.ಆರ್.ಲೇಔಟ್ ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಾರಾ ಬಡಾಯಿಕ್(21) ಎಂಬವರು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 12:30ರ ವೇಳೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.
ಘಟನೆ ವೇಳೆ ಯುವತಿಯ ಜೊತೆಗೆ ದಿಲೀಪ್(38) ಎಂಬವರು ಕೂಡ ಇದ್ದರು ಎನ್ನಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದ್ದು, ಈ ವೇಳೆ ತಾರಾ ಅವರಿಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka