ಬೈಕ್ ಸವಾರನ ಮೇಲೆ ಹರಿದ ಲಾರಿ: ಸವಾರ ಸ್ಥಳದಲ್ಲೇ ಸಾವು
ಸುರತ್ಕಲ್: ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಬಳಿ ರಾ.ಹೆದ್ದಾರಿ 66 ರಲ್ಲಿ ನಡೆದಿದೆ.
ಉಡುಪಿ ಕಟಪಾಡಿಯ ಮಟ್ಟು ಗ್ರಾಮದ ನಿವಾಸಿ ಅಕ್ಷಯ್ (33) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ಕಟಪಾಡಿಯ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಲಾರಿ ಮತ್ತು ಬೈಕ್ ಉಡುಪಿ ಕಡೆಗೆ ತೆರಳುತ್ತಿದ್ದವು. ಹೆದ್ದಾರಿಯಲ್ಲಿ ವಾಹನ ದಟ್ಟಣೆಯಿಂದಾಗಿ ಬಲ ಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ನಿಯಂತ್ರಣ ಕಳೆದುಕೊಂಡು ಪರಿಣಾಮ ಅಕ್ಷಯ್ ಅವರ ಬೈಕ್ ತಾಗಿದೆ. ಈ ವೇಳೆ ಅವರು ರಸ್ತೆಗೆ ಬಿದ್ದ ಪರಿಣಾಮ ಲಾರಿಯ ಹಿಂಭಾಗದ ಚಕ್ರ ಅವರ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.
ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka