ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?
ಮೈಸೂರು: ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರು ಇದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾದ ಘಟನೆ ನಡೆದಿದ್ದು, ಈ ವೇಳೆ ಸಚಿವರ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸಂಜೆ ಮೈಸೂರಿನ ಬಂಬೂ ಬಜಾರ್ ಬಳಿ ಈ ಘಟನೆ ನಡೆದಿದ್ದು, ಘಟನೆ ವೇಳೆ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವುದನ್ನು ಬಿಟ್ಟು, ಸಚಿವರ ಸಿಬ್ಬಂದಿ ಕಾರಿನ ಮೇಲಿದ್ದ ಬಾವುಟವನ್ನು ತೆಗೆಯಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರ ಕಾರು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ.
ಇದೇ ವೇಳೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮಧ್ಯಪ್ರವೇಶಿಸಿ ಸಚಿವರ ಕಾರನ್ನು ಸ್ಥಳದಿಂದ ಕಳುಹಿಸಲು ಯತ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರ ಜೊತೆಗೆ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ದಾರೆನ್ನಲಾಗಿದೆ. ಈ ವೇಳೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಬೈಕ್ ಸವಾರನನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ.
ಘಟನೆಯ ಬಳಿಕ ಮಾತನಾಡಿದ ಅವರು, ಈ ಘಟನೆಯ ಬಗ್ಗೆ ನನಗೆ ತೀವ್ರವಾಗಿ ನೋವಾಗಿದೆ. ನಾನೇ ಆಸ್ಪತ್ರೆಗೆ ಖುದ್ದಾಗಿ ಹೋಗಿ ಯುವಕನನ್ನು ದಾಖಲಿಸಿದ್ದೇನೆ. ಆತ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಯಸಿದರೆ, ಸ್ಥಳಾಂತರ ಮಾಡಿಸಲು ಸಿದ್ಧ. ಚಿಕಿತ್ಸೆಯ ಸಂಪೂರ್ಣ ವೆಚ್ಚ ನಾನೇ ಭರಿಸುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್
ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾ ಹೊಂದಿದೆ | ಹೆಚ್.ಡಿ.ಕುಮಾರಸ್ವಾಮಿ
ಆಸೆ ಪೂರೈಸು ಎಂದು ಪೀಡಿಸಿದ ವಿವಾಹಿತನ ಕಿರುಕುಳ ತಾಳಲಾರದೇ ದುರಂತ ಸಾವಿಗೀಡಾದ ಬಾಲಕಿ!
‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ
ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!
75 ಯುವತಿಯರನ್ನು ಮದುವೆಯಾಗಿ, 200 ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ಪಾಪಿ ಅರೆಸ್ಟ್!
ಆನಂದ್ ಸಿಂಗ್, ಕಂಪ್ಲಿ ಗಣೇಶ್ ಎಣ್ಣೆ ಏಟು: ಕೊನೆಗೂ ಪ್ರಕರಣ ರಾಜಿಯಲ್ಲಿ ಇತ್ಯರ್ಥ