ಬೈಕು, ಟಿವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ ರದ್ದಾಗುವುದೇ? | ಕೊನೆಗೂ ಸ್ಪಷ್ಟನೆ ನೀಡಿದ ಇಲಾಖೆ

bpl card
04/09/2021

ಬೆಂಗಳೂರು: ಬೈಕು, ಟಿವಿ, ಫ್ರಿಡ್ಜ್ ಹೊಂದಿರುವ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎನ್ನುವ ಮಾಧ್ಯಮ ವರದಿಗಳಿಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ ನೀಡಿದ್ದು, ಈ ವರದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಬೈಕ್, ಟಿವಿ ಹಾಗೂ ಫ್ರಿಡ್ಜ್ ಹೊಂದಿದ್ದಾರೆ ಎಂಬ ಕಾರಣಕ್ಕೆ ಯಾವುದೇ ಅಂತ್ಯೋದಯ ಅನ್ನ ಮತ್ತು ಬಿಪಿಎಲ್ ಕಾರ್ಡ್ ಪಡಿತರ ಚೀಟಿದಾರರ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ. ಬೈಕ್, ಟಿವಿ, ಫ್ರಿಡ್ಜ್ ಹೊಂದಿರುವ ಕುಟುಂಬಗಳು ಕೂಡ ಬಿಪಿಎಲ್  ಚೀಟಿ ಹೊಂದಲು  ಸರ್ಕಾರದ ನಿಯಮದಲ್ಲಿ ಅವಕಾಶವಿದೆ ಎಂದು ಇಲಾಖೆಯು ತಿಳಿಸಿದೆ.

ಬೈಕ್, ಟಿವಿ ಹಾಗೂ ಫ್ರಿಡ್ಜ್ ಹೊಂದಿದ ಕುಟುಂಬಗಳ ಕಾರ್ಡ್ ರದ್ದುಪಡಿಸಲಾಗಿದೆ ಎನ್ನುವ ಸುದ್ದಿಗಳು ಆಧಾರ ರಹಿತವಾಗಿದೆ. ಇಂತಹ ಯಾವುದೇ ನಿರ್ದೇಶನ  ಅಥವಾ ಆದೇಶಗಳನ್ನು ರಾಜ್ಯ ಸರ್ಕಾರ ಯಾವುದೇ ಜಿಲ್ಲೆಗೆ ನೀಡಿಲ್ಲ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.

ಇನ್ನಷ್ಟು ಸುದ್ದಿಗಳು…

ನಿಮ್ಮ ಜೀವ ನಿಮ್ಮ ರಕ್ಷಣೆ ಎಂಬುದನ್ನು ಮರೆಯಬೇಡಿ | ಸಿಎಂ ಬಸವರಾಜ್ ಬೊಮ್ಮಾಯಿ

ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ!

ಹಾಸ್ಟೆಲ್ ನ ರಹಸ್ಯ ಮುಚ್ಚಿ ಹಾಕಲು ಅತ್ಯಾಚಾರದ ಕಥೆ ಕಟ್ಟಿದ ವಿದ್ಯಾರ್ಥಿನಿ?

ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ವಾಹನಗಳನ್ನು ತಡೆದ ಯುವತಿ | “ಏನಾಯ್ತಮ್ಮಾ…” ಎಂದು ಕೇಳಲು ಹೋದವರಿಗೆ ಅವಾಚ್ಯ ಬೈಗುಳ!

1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯುವ ಚಿಂತನೆ ಸದ್ಯಕ್ಕಿಲ್ಲ | ಸಚಿವ ಸುಧಾಕರ್

ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ

ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರ ನನಗಿಲ್ಲ, 2023ರ ಚುನಾವಣೆಗಾಗಿ ಕಾಯುತ್ತಿದ್ದೇನೆ | ಬಿ.ವೈ.ವಿಜಯೇಂದ್ರ

ಇತ್ತೀಚಿನ ಸುದ್ದಿ

Exit mobile version