ಮನೆಯ ಮುಂದೆ ನಿಲ್ಲಿಸಿದ್ದ 8 ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ | ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ - Mahanayaka

ಮನೆಯ ಮುಂದೆ ನಿಲ್ಲಿಸಿದ್ದ 8 ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ | ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

18/01/2021

ದೊಡ್ಡಬಳ್ಳಾಪುರ: ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿರುವ ಘಟನೆ  ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದ್ದು, ಘಟನೆಯಲ್ಲಿ 8 ಬೈಕ್ ಗಳು ಸುಟ್ಟು ಕರಕಲಾಗಿವೆ.

ಈ ಘಟನೆ ಜನವರಿ 12ರಂದು ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸಿಸಿ ಕ್ಯಾಮರ ದೃಶ್ಯಾವಳಿಗಳಿಂದ ದುಷ್ಕರ್ಮಿಯ ಕೃತ್ಯ ಬಯಲಾಗಿದೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಅವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಬೈಕ್ ನಲ್ಲಿ ಬಂದಿದ್ದ ಕಿಡಿಗೇಡಿ ಬೈಕ್ ಮತ್ತು ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು , ತನಿಖೆ ಮುಂದುವರಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ