ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ:10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದಿದ್ದು,10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇಂದು ಬಿಳಿಕಲ್ಲುಗಳನ್ನು ತೆಗೆಯುತ್ತಿರುವಾಗ ದಿಢೀರನೇ ಕ್ವಾರಿ ಗುಡ್ಡ ಕುಸಿದಿದೆ. ಭಾರಿ ಗಾತ್ರದ ಕಲ್ಲುಗಳು ಉರುಳಿ ಬಿದ್ದಿದ್ದರಿಂದ ಟಿಪ್ಪರ್ ಮತ್ತು ವಾಹನಗಳು ಪಲ್ಟಿಯಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ಸ್ಥಳಕ್ಕೆ ಗ್ರಾಮಸ್ಥರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ