ಬ್ರಹ್ಮಕಲಶೋತ್ಸವಕ್ಕೆ ರೋಹಿತ್ ಚಕ್ರತೀರ್ಥ ಅವರನ್ನು ಆಹ್ವಾನಿಸಿರುವುದು ನೋವು ತಂದಿದೆ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ರೋಹಿತ್ ಚಕ್ರತೀರ್ಥ ಅವರನ್ನು ಆಹ್ವಾನಿಸಿರುವುದು ತೀವ್ರ ನೋವನ್ನುಂಟುಮಾಡಿದೆ ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೋಹಿತ್ವಚಕ್ರ ತೀರ್ಥ ಅವರು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿದ್ದಾಗ ವಿಶ್ವ ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯಪುಸ್ತಕದಿಂದ ತೆಗೆದು ಹಾಕುವ ಕಾರ್ಯವನ್ನು ಮಾಡಿದ್ದರು. ಇಂದಿಗೂ ಈ ವಿಚಾರ ಸಮರ್ಪಕವಾಗಿ ಬಗೆಹರಿದಿಲ್ಲ ಎಂದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಮತ್ತು ರಾಷ್ಟ್ರ ಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದ ವಿವಾದಾತ್ಮಕ ವ್ಯಕ್ತಿಯನ್ನು ಉಪನ್ಯಾಸಕ್ಕೆ ಆಹ್ವಾನಿಸಿ ಸಮಾಜವನ್ನು ಅವಮಾನಿಸಿರುವುದು ನಾರಾಯಣ ಗುರುಗಳ ಭಕ್ತರಾದ ನಮಗೆ ತೀವ್ರ ನೋವನ್ನುಂಟುಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ರೋಹಿತ್ ಚಕ್ರತೀರ್ಥ ಅವರನ್ನು ಕಾರ್ಯಕ್ರಮದಿಂದ ಹೊರಗಿಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಗೆ ಪತ್ರ ಬರೆದು ವಿನಂತಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw