ಬಿರ್ಭೂಮ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್ - Mahanayaka
3:17 PM Wednesday 5 - February 2025

ಬಿರ್ಭೂಮ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

birbum1
25/03/2022

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದ್ದು, ಏ. 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಹಾಗೂ ಸಂಬಂಧಿಸಿದ ಕಾಗದ ಪತ್ರಗಳನ್ನು ಪಶ್ಚಿಮ ಬಂಗಾಳ ಸರ್ಕಾರ ರಚಿಸಿರುವ ಎಸ್‌ಐಟಿ, ಸಿಬಿಐಗೆ ಹಸ್ತಾಂತರಿಸುವಂತೆ ಹೈಕೋರ್ಟ್ ಸೂಚಿಸಿದೆ.

ಟಿಎಂಸಿಯ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ನಂತರ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಹತ್ಯೆ ಪ್ರಕರಣದ ಬಗ್ಗೆ ಬುಧವಾರ ಕೋಲ್ಕತ್ತಾ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಬಿರ್ಭೂಮ್ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೂ ಸುಮಾರು 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಮನೋಜ್ ಮಾಳವೀಯಾ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಚ್ಚರಿಯ ಹೇಳಿಕೆ: ಚುನಾವಣಾ ರಾಜಕಾರಣದಿಂದ ನಿವೃತ್ತಿ; ವಿಪಕ್ಷ ನಾಯಕ ಸಿದ್ದರಾಮಯ್ಯ

ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್‌ಸಿ ಪ್ರಮಾಣ ಪತ್ರ: ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ

ಅಘಾತಕಾರಿ ಘಟನೆ: ಸರಕು ಸಾಗಣೆ ಹಡಗಿನಿಂದ ನದಿಗೆ ಬಿದ್ದ12 ಟ್ರಕ್‌; 10ಕ್ಕೂ ಹೆಚ್ಚು ಮಂದಿ ಸಾವು

ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ಮದರಸಾ ಶಿಕ್ಷಣ ಮಂಡಳಿ ತೀರ್ಮಾನ

ಇತ್ತೀಚಿನ ಸುದ್ದಿ