ಮಂಗಳೂರಿನಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ - Mahanayaka
3:25 AM Wednesday 5 - February 2025

ಮಂಗಳೂರಿನಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ

mangalore airport
25/05/2023

ಟೇಕಾಫ್ ​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಮಂಗಳೂರು ಏರ್ ಪೋರ್ಟ್ ನಲ್ಲಿ ಭಾರೀ ದುರಂತವೊಂದು ತಪ್ಪಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವನ್ನು ವಾಪಾಸ್ ತರಲಾಗಿದೆ.

ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ