ಶಾಕಿಂಗ್ ನ್ಯೂಸ್: ಹುಟ್ಟು ಹಬ್ಬದ ಪಾರ್ಟಿಗೆ ಆಗಮಿಸಿದ್ದ ಮಹಿಳಾ ಪೊಲೀಸ್ ಮೇಲೆ ಸಾಮೂಹಿಕ ಅತ್ಯಾಚಾರ

ನೀಮುಚ್: ಮಹಿಳಾ ಕಾನ್ ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ಆರೋಪಿಗಳು, ಘಟನೆಯ ಬಗ್ಗೆ ದೂರು ನೀಡಿದರೆ, ಹತ್ಯೆ ಮಾಡುವುದಾಗಿಯೂ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸೆಪ್ಟಂಬರ್ ತಿಂಗಳ ಆರಂಭದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳಾ ಪೊಲೀಸ್ ಗೆ ಫೇಸ್ ಬುಕ್ ಮೂಲಕ ಆರೋಪಿಗಳು ಪರಿಚಯವಾಗಿದ್ದರು. ಹೀಗೆ ಸ್ನೇಹ ಮುಂದುವರಿದಿತ್ತು. ಇದೇ ಸಂದರ್ಭ ಪ್ರಮುಖ ಆರೋಪಿಯು ತನ್ನ ಸಹೋದರನ ಹುಟ್ಟು ಹಬ್ಬಕ್ಕೆ ಆಹ್ವಾನಿಸಿದ್ದು, ಈ ಪಾರ್ಟಿಯಲ್ಲಿ ಇಬ್ಬರು ಸಹೋದರರು ಹಾಗೂ ಅವರ ಸ್ನೇಹಿತ ಸೇರಿ ಸಾಮೂಹಿಕವಾಗಿ ಅತ್ಯಾಚಾರ ನಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಅತ್ಯಾಚಾರದ ವೇಳೆ ವಿಡಿಯೋ ಚಿತ್ರೀಕರಣ ಮಾಡಿದ್ದು, ದೂರು ನೀಡಿದರೆ, ವಿಡಿಯೋವನ್ನು ವೈರಲ್ ಮಾಡುವುದಾಗಿ ಮತ್ತು ನಿನ್ನನ್ನು ಹತ್ಯೆ ಮಾಡುತ್ತೇವೆ ಎಂದು ಸಂತ್ರಸ್ತೆಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸದ್ಯ ಸಂತ್ರಸ್ತ ಮಹಿಳಾ ಕಾನ್ಸ್ ಸ್ಟೇಬಲ್ ಇಂದೂರ್ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಆದರೆ ಅವರು ನೀಮುಚ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು ಎಂದು ಹೇಳಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ | ಬಿಜೆಪಿ ಸಂಸದನಿಗೂ ಗಾಯ
ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ!
ಚಿಕಿತ್ಸಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಮಾಲಿಕ ಸಹಿತ ಮೂವರು ಅರೆಸ್ಟ್
“ಗದ್ದೆ ನೋಡಲು ಹೋಗೋಣ ಬಾ” ಎಂದು ಪತ್ನಿಯನ್ನು ಕರೆದೊಯ್ದು ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ
“ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣವನ್ನು ಮದುವೆ, ಮುಂಜಿಗೂ ಬಾಡಿಗೆಗೆ ಕೊಡಬಹುದು”
ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿ ಅರೆಸ್ಟ್