ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು
ಹೈದರಾಬಾದ್: ಬಿಸಿ ಸಾಂಬಾರ್ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ( 2) ಮೃತ ಬಾಲಕಿ. ಫೆ. 13ರಂದು ಈ ಘಟನೆ ನಡೆದಿದ್ದು, ಈಕೆ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಳು. ಆಕೆಯ ಪೋಷಕರು ಅತಿಥಿಗಳನ್ನು ಭೇಟಿ ಮಾಡಲು ಮತ್ತು ಊಟ ಬಡಿಸಲು ಹೋದಾಗ, ಬಾಲಕಿ ಅಡುಗೆ ಮನೆಗೆ ಹೋಗಿ ಕುರ್ಚಿ ಮೇಲೆ ಹತ್ತಿ ಆಟವಾಡುತ್ತಿದ್ದ ವೇಳೆ ಬಿಸಿ ಸಾಂಬಾರ್ ತುಂಬಿದ ಪಾತ್ರೆಯಲ್ಲಿ ಬಿದ್ದಿದ್ದಾಳೆ.
ತಕ್ಷಣ ಬಾಲಕಿಯನ್ನು ಪೋಷಕರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆಕೆಯನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೇಜಸ್ವಿ ಸಾವನ್ನಪ್ಪಿದ್ದಾಳೆ. ಈ ಘಟನೆ ಸಂಬಂಧ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ
ಕುಡಿದ ಮತ್ತಿನಲ್ಲಿ ಮೊಬೈಲ್ಗಾಗಿ ಜಗಳ: ಸ್ನೇಹಿತನ ಕೊಲೆಯಲ್ಲಿ ಅಂತ್ಯ