ಬಿಟ್ ಕಾಯಿನ್ ಹಗರಣ ಆರೋಪ ನಿರ್ಲಕ್ಷಿಸಲು ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಸಲಹೆ!
ನವದೆಹಲಿ: ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಕ್ಕೆ ತಲೆಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದ ಬಗ್ಗೆ ಮೋದಿ ಯಾವುದೇ ವಿವರಣೆ ಕೇಳಲಿಲ್ಲ. ಆದರೆ, ನಾನೇ ಬಿಟ್ ಕಾಯಿನ್ ಬೆಳವಣಿಗೆಯ ಕುರಿತು ಪ್ರಸ್ತಾಪಿಸಿದಾಗ, ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಕಿವಿಮಾತು ಹೇಳಿದರು ಎಂದು ಬೊಮ್ಮಾಯಿ ಹೇಳಿದರು ಎಂದು ವರದಿಯಾಗಿದೆ.
ಅರ್ಧ ಗಂಟೆಗೂ ಅಧಿಕ ಸಮಯ ಭೇಟಿ ನಡೆದ ಸಂದರ್ಭದಲ್ಲಿ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ಕುರಿತ ವಿಷಯಗಳು ಚರ್ಚೆಗೊಳಗಾದವು. ನೂರು ದಿನಗಳ ಅಧಿಕಾರವಧಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಬೊಮ್ಮಾಯಿ ತಿಳಿಸಿದರು.
ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ನೀಡುತ್ತಿರುವ ಬಗ್ಗೆ ಪ್ರಧಾನಿ ವಿವರ ಪಡೆದರು. ದೇಶಾದ್ಯಂತ ಈ ಕಾರ್ಯಕ್ರಮವನ್ನು ವಿಸ್ತರಿಸುವ ಚಿಂತನೆ ಇದೆ ಎಂದು ಪ್ರಧಾನಿ ಹೇಳಿದರು ಎಂದು ಬೊಮ್ಮಾಯಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಶೀಘ್ರದಲ್ಲೇ ಮದುವೆಯಾಗ್ತಾರಂತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಟಿ ಕಂಗನಾ!
80 ಕೋಟಿ ಬಡವರ ಖಾತೆಗೆ ಕನ್ನ | ಶ್ರೀಕೃಷ್ಣನ ಮೇಲೆ ಮತ್ತೊಂದು ಗಂಭೀರ ಆರೋಪ
ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ ಪ್ರಕರಣಕ್ಕೆ ತಿರುವು!
ನದಿಗೆ ಇಳಿದು ವಿಡಿಯೋ ಮಾಡುತ್ತಿದ್ದ ವೇಳೆ ಯುವಕ ನೀರುಪಾಲು! | ವಿಡಿಯೋ ವೈರಲ್