ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!
ತಮಿಳುನಾಡು: ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಐದು ಸದಸ್ಯರನ್ನು ಹೊಂದಿರುವ ಕುಟುಂಬದ ವ್ಯಕ್ತಿಯೊಬ್ಬರು ಬಿಜೆಪಿಯಿಂದ ಸ್ಪರ್ಧಿಸಿದ್ದು, ಆದರೆ ಅವರು ಪಡೆದದ್ದು ಕೇವಲ ಒಂದು ಮತ ಮಾತ್ರವೇ ಆಗಿದೆ. ಅವರ ಕುಟುಂಬಸ್ಥರು ಕೂಡ ಅವರಿಗೆ ಮತ ಹಾಕದೇ ಇರುವುದು ಇದೀಗ ಅಚ್ಚರಿಯನ್ನು ಸೃಷ್ಟಿಸಿದೆ.
ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಕಾರ್ತಿಕ್ ಸ್ಪರ್ಧಿಸಿದ್ದರೂ, ತಮ್ಮ ಕುಟುಂಬದಲ್ಲಿ 5 ಮಂದಿ ಇದ್ದರೂ ಅವರಿಗೆ ಕುಟುಂಬಸ್ಥರೇ ವೋಟ್ ಮಾಡದೇ ಬಿಜೆಪಿಗೆ ವಿರೋಧ ವ್ಯಕ್ತಪಡಿಸುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ.
ಡಿ.ಕಾರ್ತಿಕ್ ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ಒಕ್ಕೂಟದಲ್ಲಿ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ತಮ್ಮ ಕುಟುಂಬಸ್ಥರ ಬೆಂಬಲ ಕೂಡ ಅವರಿಗೆ ದೊರೆಯಲಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಂತಹ ಕೇಂದ್ರ ನಾಯಕತ್ವದ ಫೋಟೋ ಒಳಗೊಂಡ ಪೋಸ್ಟರ್ ಗಳೊಂದಿಗೆ ಕಾರ್ತಿಕ್ ಚುನಾವಣೆಗೆ ಭಾರೀ ಪ್ರಚಾರ ಮಾಡಿದ್ದರು. ಆದರೆ, ಅವರು ಕೇವಲ ಒಂದು ಮತವನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಆರ್ ಸಿಬಿ ತಂಡದ ನಾಯಕ ಸ್ಥಾನಕ್ಕೆ ಕಣ್ಣೀರಿನ ವಿದಾಯ ಹೇಳಿದ ವಿರಾಟ್ ಕೊಹ್ಲಿ
ಬಾಲಕಿಗೆ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಬಯಲಿಗೆ: ಬಾಲಕಿಯ ಪತಿ ಅರೆಸ್ಟ್
ಮಳೆ ನೀರಿನಲ್ಲಿ ಕೊಚ್ಚಿ ಹೋದ ಲಕ್ಷಾಂತರ ರೂಪಾಯಿಯ ಮೀನುಗಳು!
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ತಾಯಿ ಮಗುವಿಗೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್
ಬಿಜೆಪಿಗೆ ಬಿಗ್ ಶಾಕ್: ಬಿಜೆಪಿ ತೊರೆದು ಪುತ್ರನೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಸಚಿವ!
ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು