ಬಿಜೆಪಿಯ ಆಡಳಿತದಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನೇ  ಅತ್ಯಾಚಾರಕ್ಕೆ ಹೊಣೆ ಮಾಡಲಾಗುತ್ತಿದೆ | ರಾಹುಲ್  ಗಾಂಧಿ

20/02/2021

ನವದೆಹಲಿ: ಬಿಜೆಪಿಯು ಅತ್ಯಾಚಾರಕ್ಕೆ ಸಂತ್ರಸ್ತರನ್ನೇ ಹೊಣೆ ಮಾಡುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಲ್ಲಿ  ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶದ 24 ವರ್ಷ ವಯಸ್ಸಿನ ಮಹಿಳೆಯ ಮೇಲೆ ನಡೆದ ಭೀಕರ ಹಲ್ಲೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ ಈ ಆರೋಪ ಮಾಡಿದ್ದು, ಆರೋಪಿಗಳನ್ನು ಬಂಧಿಸುವ ಬದಲು, ಬಿಜೆಪಿಯು ಸಂತ್ರಸ್ತೆಯನ್ನೇ  ಈ ಘಟನೆಗೆ ಹೊಣೆಗಾರರು ಎಂಬಂತೆ ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು 1 ತಿಂಗಳಾದರೂ ಭೋಪಾಲ್ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ,  ಬಿಜೆಪಿಯು ಅತ್ಯಾಚಾರ ಸಂತ್ರಸ್ತೆಯನ್ನೇ ಘಟನೆಗೆ ಹೊಣೆ ಮಾಡುತ್ತಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ  ಬಿಜೆಪಿ ಹಿಂದೇಟು ಹಾಕುತ್ತಿದ್ದು,  ಇದರಿಂದ ಅತ್ಯಾಚಾರದ ಅಪರಾಧಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version