ಬಿಜೆಪಿ ಪ್ರಚಾರ ಯಾತ್ರೆಗೆ ಕಲ್ಲೇಟು: ಸಿದ್ದರಾಮಯ್ಯನವರ ಅಣ್ಣನ ಮಕ್ಕಳ ವಿರುದ್ಧ ದೂರು - Mahanayaka
10:07 AM Wednesday 12 - March 2025

ಬಿಜೆಪಿ ಪ್ರಚಾರ ಯಾತ್ರೆಗೆ ಕಲ್ಲೇಟು: ಸಿದ್ದರಾಮಯ್ಯನವರ ಅಣ್ಣನ ಮಕ್ಕಳ ವಿರುದ್ಧ ದೂರು

siddaramanahundi
28/04/2023

ಮೈಸೂರು: ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ ರಥಕ್ಕೆ ಕಲ್ಲೇಟು ಬಿದ್ದಿದ್ದು,  ಓರ್ವ ಬಿಜೆಪಿ ಕಾರ್ಯಕರ್ತನ ಕಾಲಿಗೆ ಏಟು ಬಿದ್ದಿದೆ.

ಕಾಲಿಗೆ ಗಾಯವಾದ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನನ್ನು  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಸಂಬಂಧ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ನಾಯಕರಾದ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಚಾರ ರಥಕ್ಕೆ ಕಲ್ಲು ತೂರಾಟ ನಡೆಸಲಾಗಿದೆ. ರಥದಲ್ಲಿದ್ದ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಅವರು ಕಲ್ಲೇಟಿನಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆನ್ನಲಾಗಿದೆ.


Provided by

ಇನ್ನೂ ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ಕಾರ್ಯಕರ್ತರೊಬ್ಬರು, ಸಿದ್ದರಾಮಯ್ಯನವರ ಸಂಬಂಧಿಕರು ನಮ್ಮ ಜೊತೆಗೆ ಗಲಾಟೆ ಮಾಡಿದರು. ಏಕಾಏಕಿ ಸಿದ್ದರಾಮಯ್ಯಗೆ ಜೈ, ಸೋಮಣ್ಣಗೆ ಧಿಕ್ಕಾರ ಕೂಗಿ ಕಲ್ಲು ತೂರಾಟ ನಡೆಸಿದರು, ನಮ್ಮ ಕಾರುಗಳನ್ನು ಜಖಂಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನೂ  ಘಟನೆಗೆ ಸಂಬಂಧಿಸಿದಂತೆ ಗಾಯಾಳು ಬಿಜೆಪಿ ಕಾರ್ಯಕರ್ತ ನಾಗೇಶ್ ಅವರ ತಂದೆ ಚಂದ್ರಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದು, ಯಾರ ಹೆಸರನ್ನೂ ಉಲ್ಲೇಖಿಸದೇ ಸಿದ್ದರಾಮಯ್ಯನವರ ಅಣ್ಣನ ಮಕ್ಕಳು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ