ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮತಬೇಟೆ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಅವರು ಡೊಂಗರಕೇರಿ ವಾರ್ಡಿನ ಮಹಮ್ಮಾಯಿ ದೇವಸ್ಥಾನ ರಸ್ತೆ ಹಾಗೂ ಅಳಕೆ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು.
ಈ ವೇಳೆ ಮಾತನಾಡಿದ ಅವರು, ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಜನರ ಅಭೂತಪೂರ್ವವಾಗಿ ಬೊಂಬಲ ವ್ಯಕ್ತಪಡಿಸುತಿದ್ದಾರೆ. ಈ ಬಾರಿ ಮಂಗಳೂರು ನಗರ ದಕ್ಷಿಣದಲ್ಲಿ ಭಾರತೀಯ ಜನತಾ ಪಾರ್ಟಿ ದಾಖಲೆ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸುಜನ್ ದಾಸ್ ಕುಡುಪು, ರಮೇಶ್ ಹೆಗ್ಡೆ, ಜಯಶ್ರೀ ಕುಡ್ವ, ಶ್ರೀನಿವಾಸ್ ಶೇಟ್, ಕೃಷ್ಣಪ್ರಸಾದ್ ಶೆಟ್ಟಿ, ರಮಣ್ ಮೋಹನ್, ದೇವಾನಂದ ಶೆಣೈ, ಅರುಣ್ ಜಿ. ಶೇಟ್, ರೂಪೇಶ್ ಶೇಟ್, ಪುಷ್ಪಾ ಶೆಟ್ಟಿ, ನಾಗೇಶ್ ದೇವಾಡಿಗ, ಗೋಪಾಲ್ ಶೇಟ್, ಜನಾರ್ದನ್ ಕುಡ್ವ, ಶ್ರೀಕಾಂತ್ ಶೆಣೈ, ಅಕ್ಷತ್ ಕಾಮತ್, ಲಕ್ಷ್ಮಿ ಪ್ರಕಾಶ್ ಶೆಟ್ಟಿ, ವಿನಾಯಕ್ ಶೇಟ್ ಮುಂತಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw