ಗ್ಯಾರಂಟಿ ಯೋಜನೆಗಳನ್ನು ನಿಷೇಧಿಸಲು ಬಿಜೆಪಿಯಿಂದ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಷೇಧಿಸಲು ಬಿಜೆಪಿಯಿಂದ ಸಾಧ್ಯವಿಲ್ಲ, ಬಿಜೆಪಿಯ ಹಣೆಬರಹದಲ್ಲೇ ಅದು ಬರೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸಂಸದ ಕರಡಿ ಸಂಗಣ್ಣ ಅವರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಗ್ಯಾರಂಟಿ ಮುಂದುವರಿಯಲ್ಲ ಎಂದು ಬಿಜೆಪಿಯವರು ಹೇಳ್ತಿದ್ದಾರೆ. ಆದರೆ, ಅವರ ಹಣೆಬರಹದಲ್ಲಿ ಗ್ಯಾರಂಟಿ ತೆಗೆಯಲು ಸಾಧ್ಯವಿಲ್ಲ. ಬಿ.ಎಸ್.ಯಡಿಯೂರಪ್ಪ, ಅಶೋಕ್, ವಿಜಯೇಂದ್ರ ಎಲ್ಲರಿಗೂ ಈ ಮಾತನ್ನು ಹೇಳುತ್ತಿದ್ದೇನೆ ಎಂದರು.
ಸೋಲಿನ ಭಯದಿಂದಲೇ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ಪರ ದೊಡ್ಡ ಅಲೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಬಿಜೆಪಿಯಲ್ಲಿ ಸುಮಾರು 100 ಸಂಸದರಿಗೆ ಈ ಬಾರಿ ಟಿಕೆಟ್ ಕೊಟ್ಟಿಲ್ಲ. ಗೆಲ್ಲುವುದಿಲ್ಲ ಎಂಬುದು ಸಮೀಕ್ಷೆಯಲ್ಲಿ ಗೊತ್ತಾಗಿರುವುರಿಂದ ಸಂಸದರಿಗೆ ಟಿಕೆಟ್ ನಿರಾಕರಿಸಿದ್ದಾರೆ. ಎನ್ ಡಿಎ ಪರಿಸ್ಥಿತಿ ಏನು ಅಂತಾ ಇದರಲ್ಲೇ ಗೊತ್ತಾಗ್ತಿದೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಎಂದು ಮೋದಿ ಹೇಳುತ್ತಾರೆ. ಆದರೆ, ಅವರ ಪಕ್ಷದವರು ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth