ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ. ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಪ್ರಜಾಸತ್ತಾತ್ಮಕ ಚರ್ಚೆ ನಡೆಸಿದ ನಂತರ ಜಾರಿಗೊಳಿಸುವ ಉದ್ದೇಶವಿದೆ, ಸಂವಿಧಾನ ರಚನಾ ಸಮಿತಿ ಕೂಡ ಇದನ್ನು ಶಿಫಾರಸು ಮಾಡಿತ್ತು. ಜನ ಸಂಘದ ದಿನಗಳಿಂದಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ಶಾ ತಿಳಿಸಿದ್ದಾರೆ.
ಸಂವಿಧಾನ ರಚನಾ ಸಮಿತಿ ಕೂಡ ಸಂಸತ್ ಮತ್ತು ಎಲ್ಲಾ ರಾಜ್ಯಗಳಿಗೂ ಅನುಕೂಲಕರವಾದ ಸಮಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಲಹೆ ನೀಡಿತ್ತು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka