ರಾಜ್ಯ ಪ್ರವಾಹ ಸಂಕಷ್ಟದಲ್ಲಿರುವಾಗ ಬಿಜೆಪಿ—ಕಾಂಗ್ರೆಸ್ ನ ಬೇಜವಾಬ್ದಾರಿಯ ಜನ‘ಜಾತ್ರೆ’
ಬೆಂಗಳೂರು: ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ಇತ್ತ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ವಿಪಕ್ಷ ಕಾಂಗ್ರೆಸ್ ಎರಡೂ ಕೂಡ ಜನ ಹಿತ ಮರೆತು ಸಮಾವೇಶದಲ್ಲಿ ಮೈಮರೆತಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮಳೆಗಾಲ ಮುಗಿದರೂ ಇನ್ನೂ ಮಳೆ ನಿಂತಿಲ್ಲ, ರಾಜ್ಯದಲ್ಲಿ ರೈತರು ಬೆಳೆದ ಕೃಷಿಗಳು ನೀರಲ್ಲಿ ಕೊಚ್ಚಿ ಹೋಗಿ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ. ಇನ್ನೊಂದೆಡೆಯಲ್ಲಿ ತರಕಾರಿ, ಸೊಪ್ಪು, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಮಳೆಯಿಂದ ನಾನಾ ಅನಾಹುತಗಳಾದರೂ ಇನ್ನೂ ಪರಿಹಾರವೇ ಸಿಕ್ಕಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ, ಜನರ ಕಣ್ಣಿಗೆ ಮಣ್ಣೆರೆಚಲು ಜನಯಾತ್ರೆ ಆರಂಭಿಸಿದೆ. ಇನ್ನೊಂದೆಡೆ, ವಿಪಕ್ಷವಾಗಿ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಬೇಕಾಗಿದ್ದ, ಇದರ ವಿರುದ್ಧ ಪ್ರತಿಭಟಿಸಬೇಕಿದ್ದ ಕಾಂಗ್ರೆಸ್, ಮುಂದಿನ ಚುನಾವಣೆಗೆ ತಯಾರಿಯಾಗುವ ನಿಟ್ಟಿನಲ್ಲಿ ತಾನೂ ಜನಯಾತ್ರೆಗೆ ಮುಂದಾಗಿದೆ.
ಸಂಕಷ್ಟದಲ್ಲಿರುವ ಜನರ, ರೈತರ ಕಣ್ಣೀರೊರೆಸುವ ಕೆಲಸ ಮಾಡದೇ ನೀವು ಯಾರಿಗೆ ಜನಯಾತ್ರೆಗಳನ್ನು ಮಾಡುತ್ತಿದ್ದೀರಿ? ಎನ್ನುವ ಪ್ರಶ್ನೆಗಳನ್ನು ಇದೀಗ ಜನ ಸಾಮಾನ್ಯರು ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಕೇಳುತ್ತಿದ್ದಾರೆ. ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ ಜನಯಾತ್ರೆಗೆ ಎಂಬ ಜಾತ್ರೆಯ ಅವಶ್ಯಕತೆ ಇದೆಯಾ? ಎನ್ನುವ ಪ್ರಶ್ನೆಗಳು ಇದೀಗ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾಂಸಾಹಾರದ ಬಗ್ಗೆ ಹಿರಿಯ ಪೇಜಾವರ ಶ್ರೀಗಳು ಏನು ಹೇಳಿದ್ದರು? | ವಿಡಿಯೋ ವೈರಲ್
ಕಪ್ಪದ ಮಾನಿ ಹಂದ್ರನ ಬೇಟಿ/ ಪೊದು ಸಂಬಂಧ/ಮದುವೆ: ತುಳುನಾಡಿನ ಅವಳಿ ವೀರರು ಕಾನದ-ಕಟದರು: ಸಂಚಿಕೆ: 07
ನನ್ನ ಕಾರು ಅಪಘಾತವಾಗಿಲ್ಲ, ನಾನು ಸುರಕ್ಷಿತವಾಗಿದ್ದೇನೆ | ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಪತ್ನಿಯನ್ನು ನಾಲೆಯಲ್ಲಿ ಮುಳುಗಿಸಿ ಕೊಂದು ಹೈಡ್ರಾಮಾ ಆಡಿದ ಪತಿ | ಪೊಲೀಸರಿಗೆ ಈತ ಸಿಕ್ಕಿ ಬಿದ್ದದ್ದು ಹೇಗೆ?
ಬಿಜೆಪಿಗೆ ಮಳೆ ನಿಲ್ಲಿಸೋಕೆ ಬರುತ್ತಾ? | ಸಚಿವ ಈಶ್ವರಪ್ಪ ಬೇಜವಾಬ್ದಾರಿಯ ಹೇಳಿಕೆ!
ಪ್ರಾರ್ಥನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಚರ್ಚ್ ಧರ್ಮಗುರು ನಿಧನ