ಚಿಕ್ಕಮಗಳೂರಲ್ಲಿ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ
ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ ಆರಂಭಿಸಿದ್ದು, ಪ್ರತಿಭಟನೆಯಲ್ಲಿ ಜಯಬಸವಾನಂದ, ಚಂದ್ರಶೇಖರ ಶ್ರೀಗಳು ಭಾಗಿಯಾಗಿದ್ದಾರೆ.
ಮಾಜಿ ಸಚಿವ ಸಿ.ಟಿ.ರವಿ, ಜೀವರಾಜ್ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ಆರಂಭಗೊಂಡಿದೆ. ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಆರಂಭಗೊಂಡಿದೆ.
ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಧರಣಿ ನಡೆಯಿತು. ಸಿ.ಟಿ.ರವಿ ನೇತೃತ್ವದಲ್ಲಿ ಜನಜಾಗೃತಿ ಆಂದೋಲನ ಆರಂಭಗೊಂಡಿದೆ.
ವಕ್ಪ್ ಆಸ್ತಿ ಸಂಬಂಧ ಜಿಲ್ಲೆಯಲ್ಲಿ ಎದುರಾಗಿರುವ ಸಮಸ್ಯೆಗಳ ವಿರುದ್ಧ ಧರಣಿ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಬೆಳಗ್ಗೆ 11 ರಿಂದ ನಾಳೆ ಬೆಳಗ್ಗೆ 11ರವರೆಗೆ ಧರಣಿ ನಡೆಯಿತು.
ವಕ್ಪ್ ಆಸ್ತಿ ಬಗ್ಗೆ ಜನಜಾಗೃತಿ ಮೂಡಿಸಲು 24 ಗಂಟೆ ನಿರಂತರ ಪ್ರತಿಭಟನೆಯನ್ನು ಬಿಜೆಪಿ ನಡೆಸಲಿದೆ. ಸಿ.ಟಿ. ರವಿಗೆ ನೂರಾರು ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಕೈಜೋಡಿಸಲಿದ್ದಾರೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: