ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಘೋಷಣೆ!
ಮಾಜಿ ವಿತ್ತ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ.
ದೆಹಲಿಯಲ್ಲಿ ನಡೆದ 17 ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2018ರಲ್ಲಿ ಬಿಜೆಪಿ ತೊರೆದಿದ್ದ ಯಶವಂತ್ ಸಿನ್ಹಾ ಕಳೆದ ವರ್ಷ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಅವರು ಅಭ್ಯರ್ಥಿಯಾಗಬೇಕಾದರೆ ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಒತ್ತಾಯಿಸಿದ್ದವು. ಈ ಬೇಡಿಕೆಯನ್ನು ಸಿನ್ಹಾ ಒಪ್ಪಿಕೊಂಡಿದ್ದು, ರಾಷ್ಟ್ರಪತಿ ಅಭ್ಯರ್ಥಿಯಾಗಿ ನೇಮಕಗೊಂಡಿದ್ದಾರೆ.
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲ್ ಕೃಷ್ಣ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ ಎಂದು ಹೇಳಿದ ನಂತರ ಈಗ ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರ ಹೆಸರು ಕೇಳಿಬಂದಿದೆ.
ನಾಮಪತ್ರ ಸಲ್ಲಿಕೆಗೆ ಜೂನ್ 29 ಕೊನೆಯ ದಿನವಾಗಿದೆ. ಜುಲೈ 18 ರಂದು ಮತದಾನ ಕೊನೆಗೊಳ್ಳುತ್ತದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ
ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ತಂದೆ ತಾಯಿ!
ಅಂಗನವಾಡಿ ಕಾರ್ಯಕರ್ತೆ ಸಹಿತ ಐವರ ಮಕ್ಕಳ ಮೇಲೆ ಬಿದ್ದ ಗಂಜಿ ನೀರು
ಪ್ರಾಂಶುಪಾಲರನ್ನು ಕರೆದು ಕಪಾಳಕ್ಕೆ ಬಾರಿಸಿದ ಜೆಡಿಎಸ್ ಶಾಸಕ!: ಅನಾಗರಿಕ ವರ್ತನೆ ಕಂಡು ಅಧಿಕಾರಿಗಳು ಶಾಕ್
ಗಂಟಲಲ್ಲಿ ದಾಳಿಂಬೆ ಬೀಜ ಸಿಲುಕಿ 10 ತಿಂಗಳ ಮಗುವಿನ ದಾರುಣ ಸಾವು